News

ಐಪಿಸಿ ಪ್ರಕರಣಗಳ ವಿಚಾರಣೆ ಅಧಿಕಾರ ಭೂ ಕಳಬಳಿಕೆ ನಿಷೇಧ ವಿಶೇಷ ನ್ಯಾಯಾಲಯಕ್ಕೆ ಇಲ್ಲ: ಹೈಕೋರ್ಟ್

Share It

ಬೆಂಗಳೂರು: ಭಾರತೀಯ ದಂಡ ಸಂಹಿತೆಯ (ಐಪಿಸಿ) ಅಡಿಯಲ್ಲಿನ ಅಪರಾಧಗಳ ವಿಚಾರಣೆ ಮಾಡುವ ಯಾವುದೇ ಅಧಿಕಾರವನ್ನು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಹೊಂದಿಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ 2024ರ ಜನವರಿ 12ರಂದು ನೀಡಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಆಶಾ ಲೇ ಔಟ್‌ನ ಚನ್ನಕೇಶವ ಸಲ್ಲಿಸಿದ್ದ ಕ್ರಿಮಿನಲ್ ರಿವಿಷನ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಎಚ್.ಪಿ ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

‘ವಿಶೇಷ ನ್ಯಾಯಾಲಯವು ಕರ್ನಾಟಕ ಭೂ ಕಂದಾಯ ಕಾಯ್ದೆ- 1964ರ ಕಲಂ 192 ಎ ಅಡಿಯಲ್ಲಿ ಅಪರಾಧಗಳನ್ನು ವ್ಯವಹರಿಸಬಹುದು. ಐಪಿಸಿಯ ಕಲಂ 420ರ ಅಡಿಯಲ್ಲಿನ ಅಪರಾಧಗಳ ವಿಚಾರಣೆ ನಡೆಸಲು ಭೂ ಕಬಳಿಕೆ ನಿಷೇಧ ನ್ಯಾಯಾಲಯಕ್ಕೆ ಅಧಿಕಾರವಿಲ್ಲ’ ಎಂದು ಹೈಕೋರ್ಟ್ ಹೇಳಿದೆ.

ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಕ ಕಲಂಗಳಡಿಯ ಆರೋಪಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿಭಜಿಸಿ ಕಳುಹಿಸಬೇಕು’ ಎಂದು ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.


Share It

You cannot copy content of this page