News

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: 3 ಹಸುಗಳನ್ನು ಕೊಡಿಸಿದ ಸಚಿವ ಜಮೀರ್

Share It

ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಲಕ್ಷ ರೂ. ವೆಚ್ಚದ ಮೂರು ಹಸು ಖರೀದಿಸಿ ನೀಡಿದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದು ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ನೀಡಿ ಹಸುಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಟುಂಬದ  ಸದಸ್ಯೆ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ  ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.


Share It

You cannot copy content of this page