News

2025ನೇ ಸಾಲಿನ ಸಿಇಟಿ ಪರೀಕ್ಷೆಗೆ ಪಠ್ಯಕ್ರಮ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Share It

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ 2025ನೇ ಸಾಲಿನಲ್ಲಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್‌ ಸೈಟ್‌ನಲ್ಲಿ ಪ್ರಕಟಿಸಿದೆ.

ಪ್ರಥಮ ಮತ್ತು ದ್ವಿತೀಯ ಪಿಯುಸಿ ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ ವಿಷಯಗಳ ಪಠ್ಯಕ್ರಮವನ್ನು ವೆಬ್‌ ಸೈಟ್ ನಲ್ಲಿ ಹಾಕಿದ್ದು, ಅದನ್ನು ನೋಡಿಕೊಂಡೇ ಪರೀಕ್ಷೆಗೆ ತಯಾರಿ ನಡೆಸಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎನ್‌ಸಿಆರ್‌ಟಿಸಿ ಪಠ್ಯಕ್ರಮ ಹಾಗೂ ಶಾಲಾ ಶಿಕ್ಷಣ (ಪಿಯು) ಇಲಾಖೆ ಪ್ರಕಟಿಸಿರುವ ಪಠ್ಯ ಪುಸ್ತಕಗಳನ್ನು ಆಧಾರವಾಗಿ ಇಟ್ಟುಕೊಂಡೇ ಈ ಪಠ್ಯಕ್ರಮ ರಚಿಸಲಾಗಿದೆ. ಇದನ್ನು ಪಿಯು ಕಾಲೇಜುಗಳ ವಿಷಯ ತಜ್ಞರಿಂದಲೂ ಪರಿಶೀಲನೆ ಮಾಡಿಸಲಾಗಿದೆ ಎಂದು ವಿವರಿಸಿದ್ದಾರೆ.


Share It

You cannot copy content of this page