News

ಬಿಡಿಎ ಕಣಿಮಿಣಿಕೆಯಲ್ಲಿ ಆಯೋಜಿಸಿದ್ದ ಫ್ಲಾಟ್ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ

Share It

ಬೆಂಗಳೂರು: ಬಿಡಿಎ ಕಣಿಮಿಣಿಕೆಯಲ್ಲಿ ಆಯೋಜಿಸಿದ್ದ ಫ್ಲಾಟ್ ಮೇಳಕ್ಕೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರೆತಿದೆ.

ಶನಿವಾರ ನಡೆದ ಫ್ಲಾಟ್ ಮೇಳದಲ್ಲಿ ಸುಮಾರು 500ಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸಿದ್ದು, 175 ಫ್ಲಾಟ್ ಗಳನ್ನು ಖರೀದಿಸಿದ್ದಾರೆ. ಇದರಲ್ಲಿ ಸುಮಾರು 75 ಸಾರ್ವಜನಿಕರು ಫ್ಲಾಟ್ ನ ಪ್ರಾರಂಭಿಕ ಠೇವಣಿಯನ್ನು ಸ್ಥಳದಲ್ಲಿಯೇ ಪಾವತಿಸಿ, ಹಂಚಿಕೆ ಪತ್ರವನ್ನು ಪಡೆದಿದ್ದಾರೆ. 25 ಮಂದಿ ಚೆಕ್ ಅನ್ನು ನೀಡಿದ್ದು, ಸೋಮವಾರ ಆರ್.ಟಿ.ಜಿ.ಎಸ್. ಮೂಲಕ ಪಾವತಿಸಿದ ನಂತರ ಹಂಚಿಕೆ ಪತ್ರವನ್ನು ನೀಡಲಾಗುವುದು ಎಂದು ಬಿಡಿಎ ಅಧಿಕಾರಿಗಳು ಹೇಳಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯನ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಹೆಚ್ ಡಿ ಎಫ್ ಸಿ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳ ಪ್ರತಿನಿಧಿಗಳು ಸ್ಥಳದಲ್ಲಿ ಹಾಜರಿದ್ದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆರ್ಥಿಕ ಸದಸ್ಯರಾದ ಡಾ. ಎ. ಲೋಕೇಶ, ಮುಖ್ಯ ಲೆಕ್ಕಾಧಿಕಾರಿಯಾದ ಶ್ರೀ ಶ್ರೀನಿವಾಸಮೂರ್ತಿ, ಉಪ ಕಾರ್ಯದರ್ಶಿಯವರಾದ ಶ್ರೀ ಕೃಷ್ಣಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀಮತಿ ಇಂಬವಳ್ಳಿ, ಶ್ರೀ ಬಸವರೆಡ್ಡಿ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.


Share It

You cannot copy content of this page