News

ಡಿಕೆಶಿ ಅಥವಾ ಸತೀಶ್ ಜಾರಕಿಹೊಳಿಗೆ ಸಿಎಂ ಹುದ್ದೆ?: ಹೈಕಮಾಂಡ್ ತೀರ್ಮಾನವೇ ಅಂತಿಮವೆಂದ ಸಿಎಂ ಸಿದ್ದು

Share It

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳು ಕೇಳಿಬಂದ ನಂತರ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಲೇ ಇದೆ. ಇದೀಗ ಈ ಚರ್ಚೆ ತಾರಕಕ್ಕೇರಿದ್ದು, ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅವರ ಅಭಿಮಾನಿಗಳು ಮುಖ್ಯಮಂತ್ರಿಗಳಾಗುತ್ತಾರೆ ಎಂಬಂತೆ ಬಿಂಬಿಸುತ್ತಿದ್ದಾರೆ. ಈ ವಿಚಾರವಾಗಿ ಬೆಂಬಲಿಗರು ಅವರನ್ನೇ ಸಿಎಂ ಎಂಬಂತೆ ಘೋಷಣೆ ಕೂಗುತ್ತಿರುವುದು ಕಂಡು ಬರುತ್ತಿದೆ ಎಂಬ ವಿಚಾರವನ್ನು ಮಾಧ್ಯಮ ಪ್ರತಿನಿಧಿಗಳು ಸಿಎಂ ಗಮನಕ್ಕೆ ತಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ ಈ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದಿದ್ದಾರೆ.

ಮಾಹಿತಿ ಇಲ್ಲ : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಲೋಕಾಯುಕ್ತದವರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಮಾತನಾಡಿದ ಸಿಎಂ, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ತಿಳಿಸಿದರು.

ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ: ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.


Share It

You cannot copy content of this page