ಸಾಲಕ್ಕೆ ಬೇಸತ್ತು ಜ.21 ರಾತ್ರಿ 9 ಗಂಟೆ ಸುಮಾರಿಗೆ ಪ್ರತಿಷ್ಠಿತ ಮಾಲ್ ಆದ ಮಂತ್ರಿ ಮಾಲ್ ನಲ್ಲಿ ಸುಮಾರು 55 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಮೃತನನ್ನ ತಿಪಟೂರು ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ.
ಮಂಜುನಾಥ್ ಬೆಂಗಳೂರಿನ ನಾಗರಭಾವಿಯಲ್ಲಿ ವಾಸವಾಗಿದ್ದು, ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡಿದ್ದರು. ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಗುರುವಾರ ಸಂಜೆ ಮಾಲ್ ಗೆ ಬಂದಿದ್ದ ಮಂಜುನಾಥ್ ಅವರು, ರಾತ್ರಿ 9 ಗಂಟೆ ಸುಮಾರಿಗೆ ಮಂತ್ರಿ ಮಾಲ್ ನ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲ್ನೋಟಕ್ಕೆ ಸಾಲಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೇ ಎನ್ನಲಾಗಿದೆ.
ಇನ್ನು ಪೊಲೀಸರು ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಪ್ರಾರಂಭಿಸಿದ್ದಾರೆ. ಸದ್ಯ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಂಜುನಾಥ್ 2 ಕೋಟಿ ಸಾಲ ಮಾಡಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.