ಬೆಂಗಳೂರು: ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಗುತ್ತಿದೆ.
![](https://infotime.in/wp-content/uploads/2025/02/1001176720-1024x768.jpg)
ನಗರದಲ್ಲಿ ಪ್ರತಿನಿತ್ಯ ಸ್ವಚ್ಛತೆ ಕಾಪಾಡುವಂತಹ ಸ್ವಚ್ಛತಾ ಸಿಬ್ಬಂದಿಗಳು ಅವರ ಸುರಕ್ಷತೆಯ ಮೇಲೆ ಹೆಚ್ಚು ಗಮನ ನೀಡದೆ ಸ್ವಚ್ಛತಾ ಕಾರ್ಯದಲ್ಲಿ ಕಾರ್ಯನಿರತರಾಗಿರುತ್ತಾರೆ. ಅವರೆಲ್ಲರ ಸುರಕ್ಷೆತಯ ದೃಷ್ಟಿಯಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಪೌರಕಾರ್ಮಿಕರು, ಆಟೋ ಟಿಪ್ಪರ್ ಚಾಲಕರು ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಯಾವ ರೀತಿ ಶುಚಿತ್ವವನ್ನು ಕಾಪಾಡಿಕೊಂಡು ಸ್ವಚ್ಚತಾ ಕಾರ್ಯದಲ್ಲಿ ಕಾರ್ಯನಿರತರಾಗಬೇಕೆಂದು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ.
![](https://infotime.in/wp-content/uploads/2025/02/1001176724.jpg)
ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳನ್ನು ರಕ್ಷಿಸುವ ಮತ್ತು ಹೆಚ್ಚು ಸುಸ್ಥಿರ ಪರಿಸರವನ್ನು ಬೆಳೆಸುವ ಗುರಿಯನ್ನು ಹೊಂದಿರುವ 2 ಕ್ರಿಯಾಶೀಲ ಅಂಶಗಳ ಮೇಲೆ, ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಜಾಗೃತಿ ಕಾರ್ಯದ ಮೂಲಕ ಸರಿಯಾಗಿ ಅನುಷ್ಟಾನಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರೀಕರಿಸಲಾಗಿದೆ.
![](https://infotime.in/wp-content/uploads/2025/02/1001176730-1024x702.jpg)
ಸುರಕ್ಷತಾ ಸಾಧನಗಳ ಸಮಗ್ರ ಅಳವಡಿಕೆ:
ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಎಲ್ಲಾ ಸಿಬ್ಬಂದಿಗಳು ಸರಿಯಾದ ರಕ್ಷಣಾತ್ಮಕ ಸಾಧನಗಳನ್ನು ಧರಿಸುವ ಕಾರ್ಯಗಳು ಮತ್ತು ಕೈಗವಸ, ಮುಖವಾಡ, ಗಮ್ ಬೂಟ್ ಸೇರಿದಂತೆ ಇನ್ನಿತರ ಸುರಕ್ಷತಾ ಕ್ರಮಗಳಿಂದ ಆರೋಗ್ಯ ಸಮಸ್ಯೆಗಳು ಹಾಗೂ ಯಾವುದಾದರು ಅನಾಹುತಗಳು ಸಂಭವಿಸುವುದನ್ನು ತಡೆಯುವುದು ಮುಖ್ಯ ಉದ್ದೇಶವಾಗಿದೆ.
![](https://infotime.in/wp-content/uploads/2025/02/1001176756-1024x576.jpg)
ವಿಂಗಡಿಸಿದ ತ್ಯಾಜ್ಯ ಸಂಗ್ರಹಣೆ:
ನಗರದಲ್ಲಿ ಪ್ರಮುಖವಾಗಿ ಮರುಬಳಕೆ ಮತ್ತು ವಿಲೇವಾರಿ ಪ್ರಕ್ರಿಯೆಗಳನ್ನು ಹೆಚ್ಚಿಸಲು ಮೂಲದಲ್ಲಿಯೇ ತ್ಯಾಜ್ಯ ಬೇರ್ಪಡಿಸುವಿಕೆಯ ಮಹತ್ವವದ ಕುರಿತು ನಾಗರೀಕರಲ್ಲಿ ಹೆಚ್ಚು ಅರಿವು ಮೂಡಿಸಲಾಗುತ್ತಿದೆ. ಮನೆ-ಮನೆ ಕಸ ಸಂಗ್ರಹಣೆಯ ಸಮಯದಲ್ಲಿ ನಿವಾಸಿಗಳಿಗೆ ಹಸಿ ಮತ್ತು ಒಣ ಕಸವನ್ನು ಕಡ್ಡಾಯವಾಗಿ ಪ್ರತ್ಯೇಖಿಸಿ ನೀಡಲು ತಿಳಿಸುವುದು, ಕಸವನ್ನು ಪ್ಲಾಸಟಿಕ್ ಕವರ್ ನಲ್ಲಿ ನೀಡದೆ ಡಬ್ಬದಲ್ಲಿ ಹಾಕಿ ನೀಡುವುದು ಜಾಗೃತಿ ಅಭಿಯಾನದ ಮುಖ್ಯ ಉದ್ದೇಶವಾಗಿದೆ.