News

ಸೇನಾಧಿಕಾರಿಗಳಿಗೆ ಕನಿಷ್ಠ ಗೌರವವನ್ನಾದರೂ ನೀಡಿ: ಅಧಿಕಾರಿಗಳಿಗೆ ಹೈಕೋರ್ಟ್ ತರಾಟೆ

Share It

ಬೆಂಗಳೂರು: ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಲೆಫ್ಟಿನೆಂಟ್ ಜನರಲ್‌ ಅವರ ನಿವೇಶನ ಹಂಚಿಕೆ ವಿಚಾರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧಿಕಾರಿಗಳು ತೋರಿದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ನಿವೃತ್ತ ಸೇನಾ ಸಿಬ್ಬಂದಿಗೆ ಹಂಚಿಕೆಯಾಗಿರುವ ನಿವೇಶನವನ್ನು ಕೂಡಲೇ ಕ್ರಯಪತ್ರ ಮಾಡಿ ಕೊಡುವಂತೆ ಆದೇಶಿಸಿದೆ.

ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿಎನ್‌ಬಿಎಂ ಪ್ರಸಾದ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾ. ಜಿ.ಬಸವರಾಜು ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ದೇಶವನ್ನು ರಕ್ಷಿಸುವ ರಕ್ಷಣಾ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಮತ್ತು ಅದರ ಅಂಗ ಸಂಸ್ಥೆಗಳು ಕನಿಷ್ಠ ಗೌರವದಿಂದ ನಡೆಸಿಕೊಳ್ಳಬೇಕು ಎಂದು ಕೋಟ್೯ ಅಭಿಪ್ರಾಯಪಟ್ಟಿದೆ.

ಮುಡಾ ಅಧಿಕಾರಿಗಳು ನಿವೇಶನದ ಕ್ರಯಪತ್ರ ಮಾಡಿ ನಿವೇಶನವನ್ನು ಅವರ ಸುಪರ್ದಿಗೆ ಒಪ್ಪಿಸಬೇಕು. ಇಲ್ಲವೇ ಸಮಾನ ವಿಸ್ತೀರ್ಣ ಮತ್ತು ಮೌಲ್ಯದ ಪರ್ಯಾಯ ನಿವೇಶನವನ್ನು 8 ವಾರಗಳಲ್ಲಿ ಹಂಚಿಕೆ ಮಾಡಬೇಕು. ಜಿಲ್ಲಾ ಗ್ರಾಹಕ ನ್ಯಾಯಾಲಯದ ಆದೇಶದಂತೆ ಅರ್ಜಿದಾರರಿಗೆ 2001ರ ಫೆಬ್ರವರಿಯಿಂದ ಅನ್ವಯವಾಗುವಂತೆ ದಿನಕ್ಕೆ 500 ರೂ.ನಂತೆ ದಂಡವನ್ನು ಶೇ.10ರ ಬಡ್ಡಿ ಸಹಿತ ನೀಡಬೇಕು, ಆ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಯ ವೇತನದಿಂದ ಕಡಿತಗೊಳಿಸಬೇಕು ಎಂದು ನಿರ್ದೇಶನ ನೀಡಿದೆ.


Share It

You cannot copy content of this page