ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ/ ಸ್ನಾತಕೋತ್ತರ ಪದವಿಗಳು, ಡಿಪ್ಲೋಮಾ ಹಾಗೂ ಯುಜಿ/ಪಿಜಿ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಇಂದಿನಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-1 ಬಾಪೂಜಿನಗರದಲ್ಲಿ ಆನ್ ಲೈನ್ ಮೂಲಕ ಪ್ರಾವೇಶಾತಿಯನ್ನು ಪ್ರಾರಂಭಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಿ ಅಥವಾ ಪ್ರಾದೇಶಿಕ ಕೇಂದ್ರಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ, ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳ್ಳಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ- 1, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆಗಳಾದ 080-2600 3664 ಹಾಗೂ 9844965515 ಮೂಲಕ ಸಂಪರ್ಕಿಸಬಹುದಾಗಿದೆ.