ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಆಹ್ವಾನ ನೀಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 2024 -25ನೇ ಸಾಲಿನಲ್ಲಿ ನಡೆಯುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ, ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಮುಂದಾಗಿದೆ. ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅತ್ಮಸ್ಥೈರ್ಯದಿಂದ ಹೋರಾಡಿ ಅಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಈ ಪ್ರಶಸ್ತಿಯನ್ನು ಮೀಸಲಿಡಲಾಗಿದೆ. ಅಭಿವೃದ್ಧಿಯ ಕ್ಷೇತ್ರಗಳಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಹ ಗೌರವಕ್ಕೆ ಪಾತ್ರರಾಗಬಹುದಾಗಿದೆ.
ಅರ್ಜಿಗಳನ್ನು ತ್ರಿಪ್ರತಿಯಲ್ಲಿ ಭರ್ತಿ ಮಾಡಿ ಉಪನಿರ್ದೇಶಕರು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಹೆಚ್ . ಮರಿಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು-560029 ಇಲ್ಲಿಗೆ 2025 ರ ಫೆಬ್ರವರಿ 15 ರೊಳಗೆ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29578688 ಸಂಪರ್ಕಿಸಬಹುದಾಗಿದೆ.