ಬೆಂಗಳೂರು: ರಾಜ್ಯದ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಒಳಪಡುವ ಕೆರೆಗಳಿಗಳಲ್ಲಿನ ಮೀನು ಪಾಶುವಾರು ಹಕ್ಕಿನ ಗುತ್ತಿಗೆ ಅವಧಿಯನ್ನು ಪ್ರಕರಣಕ್ಕನುಗುಣವಾಗಿ ನಿಯಮಗಳಿಗೆ ಒಳಪಟ್ಟು ಮತ್ತೂ ಒಂದು ವರ್ಷದ ಅವಧಿಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದೆ.
11 ರಿಂದ 40 ಹೆಕ್ಟೇರ್ ವರೆಗಿನ ಪಂಚಾಯತ್ ಕೆರೆಗಳಿಗೆ ಸಂಬಂಧಿಸಿದಂತೆ ಮೀನು ಪಾಶುವಾರು ಹಕ್ಕಿನ ಅವಧಿಯನ್ನು 2023-24ನೇ ಸಾಲಿಗೆ ನವೀಕರಿಸಿಕೊಂಡಿರುವ ಗುತ್ತಿಗೆದಾರರು ಹಾಗೂ ಟೆಂಡರುದಾರರುಗಳಿಗೆ ಪ್ರಕರಣಕ್ಕನುಗುಣವಾಗಿ ಒಂದು ವರ್ಷ ಅವಧಿಗೆ ಗುತ್ತಿಗೆಯನ್ನು ಪಾವತಿ ಸಹಿತ ವಿಸ್ತರಿಸುವ ಕುರಿತು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ.
ಮೀನುಗಾರಿಕೆ ಇಲಾಖೆಯ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ಗುತ್ತಿಗೆ ಅವಧಿ ವಿಸ್ತರಿಸಿರುವಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದು ಮೀನು ಪಾಶುವಾರು ಹಕ್ಕಿನ ಅವಧಿಯನ್ನು ಮತ್ತೂ ಒಂದು ವರ್ಷ ಮುಂದುವರೆಸಲು ಈ ಹಿಂದೆ ಗುತ್ತಿಗೆದಾರರು ಕೋರಿದ್ದರು.