ಬೆಂಗಳೂರು: 2024-25ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್. ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ ಫೆಬ್ರವರಿ 25 ರಿಂದ ಮಾರ್ಚ್ 4ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಪೂರ್ವ ಸಿದ್ಧತಾ ಪರೀಕ್ಷೆಯ ಕೆಲವು ವಿಷಯಗಳ ಸಮಯವನ್ನು ಮಾರ್ಪಾಡು ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಕೂಡ ಪ್ರಕಟಿಸಲಾಗಿದೆ.
ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ರಿಂದ ಪಡೆದುಕೊಂಡು, ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಸಹ ಸೂಚಿಸಿದ್ದಾರೆ.