Education News

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗಾಗಿ ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ

Share It

ಬೆಂಗಳೂರು: 2024-25ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂಪಿಸಲಾಗಿರುವ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಮೂರು ದಿನ ಮಾತ್ರ ಬಾಕಿ ಇದೆ.

ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಡಿಸೆಂಬರ್ ತಿಂಗಳಿನಲ್ಲಿಯೇ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು 2025ರ ಫೆಬ್ರವರಿ 15 ರವರೆಗೆ ತದನಂತರ ವಿಸ್ತರಿಸಲಾಗಿತ್ತು. ಆದ್ದರಿಂದ ಇನ್ನು ಮೂರು ದಿನಗಳ ಒಳಗಾಗಿ ಆಸಕ್ತ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‍ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಾರ್ಯಕ್ರಮದ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‍ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 8050770005/080-22867628 ಅಥವಾ ಇ-ಮೇಲ್ bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನದ ಇ-ಮೇಲ್ postmetrichelpadesk@karnataka.gov.in ಅಥವಾ ತಂತ್ರಾಂಶದ ಸಹಾಯವಾಣಿ ಸಂಖ್ಯೆ 1902 ಗೆ ವಿದ್ಯಾರ್ಥಿಗಳು ಸಂರ್ಪಕಿಸಬಹುದಾಗಿದೆ.


Share It

You cannot copy content of this page