News

ಪಿಲ್ಲರ್ಸ್ ಆಫ್‌ ಬೆಂಗಳೂರು ಚಾಂಪಿಯನ್‌ಗಳ ಸಂಭ್ರಮಾಚರಣೆ; ಮೆಟ್ರೋ ಪಿಲ್ಲರ್‌ಗಳಿಗೆ ಬಣ್ಣದ ಸ್ಪರ್ಶ

Share It

ಬೆಂಗಳೂರು: ಬಯೋಕಾನ್‌ ಫೌಂಡೇಷನ್‌ನ ಸಿಎಸ್‌ಆರ್‌ ಅಡಿಯಲ್ಲಿ ನಗರದ ಐವತ್ತಕ್ಕೂ ಹೆಚ್ಚು ಮೆಟ್ರೋ ಪಿಲ್ಲರ್‌ಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಬಣ್ಣದ ಕಲಾಕೃತಿಗಳನ್ನು ಚಿತ್ರಿಸಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿವರೆಗಿನ ಮಾರ್ಗದಲ್ಲಿರುವ ಐವತ್ತಕ್ಕೂ ಅಧಿಕ ಮೆಟ್ರೋ ಪಿಲ್ಲರ್‌ಗಳ ಮೇಲೆ ಪಿಲ್ಲರ್ಸ್ ಆಫ್‌ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್‌ಗಳ ಸಂಭ್ರಮಾಚರಣೆ ಶೀರ್ಷಿಕೆಯಡಿಯಲ್ಲಿ ಚನ್ನಪಟ್ಟಣದ ಕಲೆಯನ್ನ ಬಿಂಬಿಸುವ ಕಲಾಕೃತಿಗಳನ್ನು ಸುಂದರವಾಗಿ ಚಿತ್ರಿಸಲಾಗಿದೆ.

ಹೂ ಮಾರಾಟಗಾರರು, ಎಲೆಕ್ಟ್ರೀಷಿಯನ್‌, ಟೈಲರ್‌ಗಳು, ಪ್ಲಂಬರ್ಸ್‌, ವೈದ್ಯರು, ದಾದಿಯರು, ಸಂಗೀತಗಾರರು, ವಿಜ್ಞಾನಿಗಳು, ಐಟಿ ಉದ್ಯೋಗಿಗಳು, ಏರೋಸ್ಪೇಸ್‌ ಸೇರಿದಂತೆ ನಮ್ಮ ದೈನಂದಿನ ಜೀವನದ ಭಾಗವಾಗಿರುವ ಎಲ್ಲಾ ಪಾತ್ರಧಾರಿಗಳ ಚಿತ್ರವನ್ನು ಚನ್ನಪಟ್ಟಣದ ಗೊಂಬೆಗಳಂತೆ ಸುಂದರವಾದ ಕೆತ್ತನೆಯ ರೀತಿಯಲ್ಲಿ ಚಿತ್ರಿಸಲಾಗಿದ್ದು, ಜನರ ಮನಸೂರೆಗೊಳ್ಳುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿದ ಬಯೋಕಾನ್ ಫೌಂಡೇಶನ್‌ ಮಿಷನ್‌ನ ನಿರ್ದೇಶಕಿ ಡಾ.ಅನುಪಮಾ ಶೆಟ್ಟಿ, ನಮ್ಮ ದೈನಂದಿನ ಸೆಲೆಬ್ರೆಟೀಸ್‌ಗಳನ್ನು ನೆನೆಯಲು ಪಿಲ್ಲರ್ಸ್ ಆಫ್ ಬೆಂಗಳೂರು ಹೆಸರಿನ ವಿನೂತನ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಹುಸ್ಕೂರು ಗೇಟ್‌ನಿಂದ ಪ್ರಾರಂಭವಾಗುವ ಮೆಟ್ರೋ ಪಿಲ್ಲರ್‌ಗಳ ಮೇಲೆ ನಮ್ಮ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಕಲಾ ಕೃತಿಗಳನ್ನು ಚಿತ್ರಿಸಲಾಗಿದ್ದು, ನೋಡುಗರನ್ನು ಮನಸೂರೆಗೊಳಿಸುತ್ತದೆ. ಈ ಎಲ್ಲಾ ಕಲಾಕೃತಿಗಳು ಬೀದಿ ಬದಿ ವ್ಯಾಪಾರಿಗಳು, ಆಟೋ ಡ್ರೈವರ್‌ಗಳಿಂದ ಹಿಡಿದು ಐಟಿ ವೃತ್ತಿಪರರವರೆಗೂ ಎಲ್ಲರನ್ನೂ ಒಳಗೊಂಡಿದೆ. ಚನ್ನಪಟ್ಟಣದ ಗೊಂಬೆಗಳ ಸ್ಪರ್ಶ ನೀಡಿ ಈ ಚಿತ್ರಗಳನ್ನ ಚಿತ್ರಿಸಿರುವುದು ಇನ್ನಷ್ಟು ವಿಭಿನ್ನವೆನಿಸಲಿದೆ ಎಂದಿದ್ದಾರೆ.


Share It

You cannot copy content of this page