Education News

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಸ್ಟ್ರೇ ವೇಕೆನ್ಸಿ ಸೀಟು ಹಂಚಿಕೆಗೆ ಚಾಲನೆ ನೀಡಿದ ಕೆಇಎ

Share It

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ  ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳ ಬಯಸುವ ಅಭ್ಯರ್ಥಿಗಳು ಫೆ.18 ಮತ್ತು 19ರಂದು ಕೆಇಎ ಮುಖ್ಯ ಕಚೇರಿಗೆ ಬಂದು ಮೂಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕೆಇಎ ತಿಳಿಸಿದೆ.

ಈಗಾಗಲೇ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿ ವೆರಿಫಿಕೇಷನ್ ಸ್ಲಿಪ್ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಈ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಹಾಗೂ ಮಾರ್ಗಸೂಚಿಯನ್ನು ಶೀಘ್ರವೇ ಪ್ರಕಟಿಸಲಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.


Share It

You cannot copy content of this page