News

ಕೌಶಲ್ಯಾಭಿವೃದ್ದಿ ತರಬೇತಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದರಿಂದ ಅರ್ಜಿ ಆಹ್ವಾನ

Share It

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ ವಿಷಯದ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಬೆಂಗಳೂರು ನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ಆಸಕ್ತರು ಫೆಬ್ರವರಿ 28 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆಗಳಾದ 080-22240449 / 9480843019 ಗೆ ಸಂಪರ್ಕಿಸಬಹುದಾಗಿದೆ. ಉಳಿದಂತೆ ಬೆಂಗಳೂರು ನಗರ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ದೂರವಾಣಿ ಸಂಖ್ಯೆಗಳಾದ 080-2222441/ 7795785685, ಬೆಂಗಳೂರು ಉತ್ತರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆಗಳಾದ 080-28461351/ 9480843051 ಸಂಪರ್ಕಿಸಬಹುದಾಗಿದೆ.

ಉಳಿದಂತೆ ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿಯ ದೂರವಾಣಿ ಸಂಖ್ಯೆಗಳಾದ 080-29535045/ 9480843049, ಬೆಂಗಳೂರು ದಕ್ಷಿಣ ತಾಲ್ಲೂಕು ಕಚೇರಿಯ ದೂರವಾಣಿ ಸಂಖ್ಯೆಗಳಾದ 080-26711096/9480843050, ಆನೇಕಲ್ ತಾಲ್ಲೂಕು ಕಚೇರಿಯ ದೂರವಾಣಿ ಸಂಖ್ಯೆಗಳಾದ 080-27859557/ 9480843052 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.


Share It

You cannot copy content of this page