ಬೆಂಗಳೂರು: ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಫೆಬ್ರವರಿ 28(ಶುಕ್ರವಾರ) ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ.
ಜಲಮಂಡಳಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ದೂರವಾಣಿ ಸಂಖ್ಯೆಗಳಾದ 080-22945119 ಮತ್ತು 080-22229639 ಸಂಪರ್ಕಿಸಬಹುದಾಗಿದೆ. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಬಹುದಾಗಿದೆ. ಈ ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಲಮಂಡಳಿ ಕೋರಿದೆ.