ಬೆಂಗಳೂರು: ಹುಳಿಮಾವಿನ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದಲ್ಲಿ ಮಾರ್ಚ್ 1 ರಂದು ಅಣಬೆ ಬೇಸಾಯದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು 250 ರೂಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಅವರ ಕಚೇರಿಯಲ್ಲಿ ತರಬೇತಿಯ ದಿನದಂದು ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದಾಗಿದೆ.