ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಆರಂಭವಾಗಿದ್ದು, ಮೊದಲ ದಿನ ನಡೆದ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗೆ 17,184 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗೆ 5,28,600 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಇವರಲ್ಲಿ 5,11,416 ವಿದ್ಯಾರ್ಥಿಗಳು (ಶೇ.96.75) ಪರೀಕ್ಷೆಗೆ ಹಾಜರಾಗಿದ್ದಾರೆ.
ವಿಜಯಪುರದಲ್ಲಿ ಗರಿಷ್ಠ 1,358 ವಿದ್ಯಾರ್ಥಿಗಳು ಗೈರಾಗಿದ್ದು, ಕಲಬುರಗಿ 1218, ರಾಯಚೂರು 1,186, ಬೀದರ್ 1,167 ಮತ್ತು ಬಳ್ಳಾರಿ 1022 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕನಿಷ್ಠ 38 ವಿದ್ಯಾರ್ಥಿಗಳು ಗೈರಾಗಿದ್ದು, ಶೇ.96.75 ಹಾಜರಾತಿ ದಾಖಲಾಗಿದೆ.