ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಸಕ್ತ 2024-25ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪದವಿಯಲ್ಲಿ ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಎಸ್.ಡಬ್ಲ್ಯು, ಬಿ.ಬಿ.ಎ, ಬಿ.ಸಿ.ಎ, ಬಿ.ಎಲ್.ಐ.ಎಸ್, ಸ್ನಾತಕೋತ್ತರ ಕೋರ್ಸುಗಳಾದ ಎಂ.ಎ, ಎಂ.ಎಸ್. ಸಿ, ಎಂ.ಕಾಂ, ಎಂ.ಸಿ.ಜೆ, ಎಂ.ಎಸ್.ಡಬ್ಲ್ಯು, ಎಂ.ಎಲ್.ಐ.ಎಸ್.ಸಿ, ಎಂ. ಸಿ.ಎ, ಎಂ.ಬಿ.ಎ ಹಾಗೂ ವಿವಿಧ ಪಿಜಿ ಸರ್ಟಿಫಿಕೇಟ್, ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕರಾಮುವಿಯ ವೆಬ್‌ಸೈಟ್ www.ksoumysuru.ac.in ನಲ್ಲಿ ಅರ್ಜಿ ಭರ್ತಿ, ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಿ ನಂತರ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿರುವ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ: 080-23448811 ಅಥವಾ ಮೊಬೈಲ್ ಸಂಖ್ಯೆ: 9741197921 ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಶಶಿಕಲಾ ತಿಳಿಸಿದ್ದಾರೆ.