ಬೆಂಗಳೂರು: ಭಾಗ್ಯಲಕ್ಷ್ಮೀ ಯೋಜನೆಯಡಿ 1527 ಫಲಾನುಭವಿಗಳ ಮೆಚೂರಿಟಿ ಮೊತ್ತ ಮಂಜೂರಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ರಾಜ್ಯ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 1527 ಫಲಾನುಭವಿಗಳು ನೋಂದಣಿಯಾಗಿದ್ದು, ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್.ಐ.ಸಿ.ಯಿಂದ ಮೆಚೂರಿಟಿ ಮೊತ್ತ ಕೊಡಲಾಗುತ್ತಿದೆ.
ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ಅಥವಾ ಎನ್.ಆರ್ ಕಾಲೋನಿ ಶಿಶು ಅಭಿವೃದ್ಧಿ ಬೆಂಗಳೂರು ರಾಜ್ಯ ಯೋಜನಾ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ದೂರವಾಣಿ ಸಂಖ್ಯೆ 080-26601917 ಮೂಲಕ ಸಹ ಸಂಪರ್ಕಿಸಬಹುದಾಗಿದೆ.