ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ(ಕೆಪಿಎಂಇ) ನಿಯಮಗಳನ್ನು ಉಲ್ಲಂಘನೆ ಮಾಡಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್‌ಗಳು, ಪುನರ್ವಸತಿ ಕೇಂದ್ರ ಸೇರಿ 16 ಸಂಸ್ಥೆಗಳಿಗೆ 7.35 ಲಕ್ಷ ರೂ.ಗಳ ದಂಡವನ್ನು ವಿಧಿಸಲಾಗಿದೆ.
ಬುಧವಾರ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆ 1 ಹೊರಡಿಸಿದ್ದು, ಇದರಲ್ಲಿ 16 ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ ವಿಧಿಸಲಾಗಿದೆ ಮತ್ತು ಯಲಹಂಕದ ರಾಯ್ ಫೈಲ್ ಕ್ಲಿನಿಕ್, ಕೆ.ಆರ್. ಪುರದ ಕಾಮಧೇನು ಪಂಚಗವ್ಯ ಚಿಕಿತ್ಸಾಲಯ ಈ ಎರಡೂ ಸಂಸ್ಥೆಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಸ್ಕಿನ್ ಡಿಸೈರ್ಸ್ ಡೆರ್ಮೊಕೋ ಆಸ್ಪತ್ರೆಯನ್ನು ಮುಚ್ಚಿಸಲಾಗಿದ್ದು, ಒಟ್ಟು 39 ಆರೋಗ್ಯ ಸಂಬಂಧಿತ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿ ಮಾಹಿತಿ ನೀಡಿದ್ದಾರೆ.