ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆಗೆ 20,187 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮತ್ತೊಂದೆಡೆ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆಗೆ 5,39,503 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಇವರಲ್ಲಿ 5,19,316 ವಿದ್ಯಾರ್ಥಿಗಳು (ಶೇ. 96.26) ಪರೀಕ್ಷೆಗೆ ಹಾಜರಾಗಿದ್ದಾರೆ. ಬಳ್ಳಾರಿಯಲ್ಲಿ ಗರಿಷ್ಠ 1,667 ವಿದ್ಯಾರ್ಥಿಗಳು ಗೈರಾಗಿದ್ದು, ಬೀದರ್ 1,579, ಕಲಬುರಗಿ 1,532, ವಿಜಯಪುರ 1,300, ಚಿಕ್ಕೋಡಿ 1,231 ಮತ್ತು ರಾಯಚೂರು 1,171 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕನಿಷ್ಠ 48 ವಿದ್ಯಾರ್ಥಿಗಳು ಗೈರಾಗಿದ್ದು, ಶೇ.96.26 ಹಾಜರಾತಿ ದಾಖಲಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿಯ ಸರ್ಕಾರಿ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲ ಕಾಪಿ ಮಾಡುತ್ತಿದ್ದರಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.