News

ಭಾನುವಾರ ನಮ್ಮ ಮೆಟ್ರೋದ ನೇರಳೆ ಮಾರ್ಗದ ಸಂಚಾರ ಭಾಗಶಃ ಬಂದ್

Share It

ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದ ಸಂಚಾರವು ಭಾನುವಾರ ಮಾ.9ರಂದು 3 ಗಂಟೆಗಳ ಕಾಲ ಭಾನುವಾರ ನಮ್ಮ ಮೆಟ್ರೋದ ನೇರಳೆ ಮಾರ್ಗದ ಸಂಚಾರ ರದ್ದಾಗಲಿದೆ.

ನೇರಳೆ ಮಾರ್ಗದಲ್ಲಿ ಮೆಟ್ರೋ ಹಳಿಯ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮಾಗಡಿ ರೋಡ್ ಹಾಗೂ ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ.ಬಿ.ಆರ್ ಅಂಬೇಡ್ಕರ್ ನಿಲ್ದಾಣ ವಿಧಾನಸೌಧ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್ ಕಾಲೇಜು, ಮೆಜೆಸ್ಟಿಕ್ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರವಿರುವುದಿಲ್ಲ.

ಚಲ್ಲಘಟ್ಟದಿಂದ ಮಾಗಡಿ ರೋಡ್ ಹಾಗೂ ಎಂಜಿ ರಸ್ತೆಯಿಂದ ವೈಟ್ ಫೀಲ್ಡ್ ವರೆಗೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದ್ದು, ಬೆಳಿಗ್ಗೆ 7 ಗಂಟೆಗೆ ಮೆಟ್ರೋ ಆರಂಭವಾಗಲಿದೆ. ಜೊತೆಗೆ ಭಾನುವಾರದಂದು ನೇರಳೆ ಮಾರ್ಗದಲ್ಲಿ ಕ್ಯೂಆರ್ ಟಿಕೆಟ್‌ಗಳ ಖರೀದಿಗೆ ಅವಕಾಶವಿರುವುದಿಲ್ಲ. ಇನ್ನೂ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆಯಿಂದ ಮಾದಾವರ ನಡುವೆ ಬೆಳಿಗ್ಗೆ 7 ಗಂಟೆಗೆ ಸಂಚಾರ ಆರಂಭವಾಗಲಿದೆ.


Share It

You cannot copy content of this page