News

ರಾಜ್ಯದ ಉತ್ತರ ಒಳನಾಡಿನಲ್ಲಿ ಹೀಟ್ ವೇವ್ ಭೀತಿ; ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share It

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಮಾರ್ಚ್ 18 ಮತ್ತು 19ರಂದು ಬಿಸಿ ಗಾಳಿಯ ಹೆಚ್ಚಾಗಲಿದ್ದು, ಅಲ್ಲಿನ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮಾರ್ಚ್ 18 ಮತ್ತು 19ರಂದು ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ಕಲ್ಬುರ್ಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಮಾರ್ಚ್ 17 ರವರೆಗೆ ಗರಿಷ್ಠ ತಾಪಮಾನ 2 ರಿಂದ 4 ಡಿ.ಸೆ ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. 18 ಮತ್ತು 19 ರಂದು ಉತ್ತರ ಒಳನಾಡಿನ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳು ಹೆಚ್ಚಾಗಲಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ, ನಂತರದ ದಿನಗಳಲ್ಲಿ ಕ್ರಮೇಣ 2 ರಿಂದ 4 ಡಿ.ಸೆ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 39.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೀದರ್, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಹಲವೆಡೆ ಮತ್ತು ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಕೆಲವು ಸ್ಥಳಗಳು ಮತ್ತು ತುಮಕೂರು, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ಕನ್ನಡ, ವಿಜಯನಗರ, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹೇಳಿದೆ.


Share It

You cannot copy content of this page