News

ವಾಹನ ಸವಾರರ ಗಮನಕ್ಕೆ; ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮಾ.31ರ ಡೆಡ್ ಲೈನ್

Share It

ಬೆಂಗಳೂರು: ರಾಜ್ಯದ ವಾಹನ ಸವಾರರಿಗೇ ಮತ್ತೆೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೀಗ ಮಾ.31 ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನ ಎಂದು ಘೋಷಿಸಲಾಗಿದೆ.

ಇನ್ನೂ ಬಹಳಷ್ಟು ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆೆಲೆಯಲ್ಲಿ ಮಾ.31ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಉಳಿದಂತೆ ಆಗಸ್ಟ್ 2023 ರಲ್ಲಿನ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಆಗಿಲ್ಲ. ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲಿಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ.

ಎಚ್‌ಎಸ್‌ಆರ್‌ಪಿ ಪ್ಲೇಟ್ ಕಡ್ಡಾಯ:

ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆೆ ಹಚ್ಚಲು ಸಹಾಯಕ ಆಗಲಿದೆ. 2019ರ ಏ.1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಾಗಿದ್ದು, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.


Share It

You cannot copy content of this page