Education News

ಎಸ್‌ಎಸ್‌ಎಲ್‌ಸಿ ಮೊದಲ ದಿನದ ಪರೀಕ್ಷೆ ಸುಸೂತ್ರ

Share It

ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನ ಯಾವುದೇ ತೊಂದರೆಯಿಲ್ಲದೇ ಸುಸೂತ್ರವಾಗಿ ನಡೆದಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಪ್ರಥಮ ಭಾಷಾ ಪರೀಕ್ಷೆಯಲ್ಲಿ 16,313 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಈ ಪರೀಕ್ಷೆಗೆ 8,38,971 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಇವರ ಪೈಕಿ 8,22,658 ವಿದ್ಯಾರ್ಥಿಗಳು (ಶೇ.98.06) ಪರೀಕ್ಷೆಗೆ ಹಾಜರಾಗಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 1,962 ವಿದ್ಯಾರ್ಥಿಗಳು ಗೈರಾಗಿದ್ದು, ರಾಯಚೂರು 1,096, ವಿಜಯಪುರ 1,082, ಬೀದರ್ 986 ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ 960 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕನಿಷ್ಠ 65 ವಿದ್ಯಾರ್ಥಿಗಳು ಗೈರಾಗಿದ್ದು, ಶೇ.98.06 ರಷ್ಟು ಹಾಜರಾತಿ ದಾಖಲಾಗಿದೆ.


Share It

You cannot copy content of this page