ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ-ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಬೆಂಗಳೂರು ನಗರದ ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆ-ಕೊಂಬೆಗಳು ಕಂಡುಬಂದಲ್ಲಿ ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ದೂರು ನೀಡಬಹುದು ಎಂದು ಬಿಬಿಎಂಪಿ ತಿಳಿಸಿದೆ.
ಬಿಬಿಎಂಪಿಯ 8 ವಲಯಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಅರಣ್ಯ ಇಲಾಖೆಯ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ (ವಾಟ್ಸ್ ಅಪ್ ಮೂಲಕ ಫೋಟೋ, ಸ್ಥಳದ ವಿವರದೊಂದಿಗೆ) ಮಾಹಿತಿ ನೀಡಲು ಕೋರಿದೆ.
ವಿಧಾನಸಭಾ ಕ್ಷೇತ್ರವಾರು ಸಂಪರ್ಕಿಸಬೇಕಾದ ಅಧಿಕಾರಿಗಳ ದೂರವಾಣಿ ಸಂಖ್ಯೆ:
- ಪಶ್ಚಿಮ ವಲಯ: ರಾಜಾಜಿನಗರ, ಗೋವಿಂದರಾಜನಗರ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿ ಸುದರ್ಶನ್- 9480683341. ಮಹಾಲಕ್ಷ್ಮಿಪುರಂ, ಗಾಂಧಿನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ರಾಜೇಶ್- 9449175978.
- ಪೂರ್ವ ವಲಯ: ಶಾಂತಿನಗರ, ಸಿ.ವಿ. ರಾಮನ್ ನಗರ, ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿ ತಿಮ್ಮಪ್ಪ– 9380090027. ಶಿವಾಜಿನಗರ, ಪುಲಿಕೇಶಿನಗರ, ಹೆಬ್ಬಾಳ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿ ನಾಗೇಂದ್ರ.ಪಿ- 9113530344.
- ದಕ್ಷಿಣ ವಲಯ: ದಕ್ಷಿಣ ವಲಯಕ್ಕೆ ಪ್ರಭಾರ ವಲಯ ಅರಣ್ಯಾಧಿಕಾರಿ ಚಂದ್ರಪ್ಪ ವಿ- 9480683655. ಬಸವನಗುಡಿ, ವಿಜಯನಗರ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿ ಶಿವಣ್ಣ– 9164597895. ಚಿಕ್ಕಪೇಟೆ, ಜಯನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿಯಾದ ಬಿ.ಬಿ ಮೇಟಿ– 9740576919. ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿ ಹರೀಶ್ ಹೆಚ್.ಆರ್- 7676165253.
- ದಾಸರಹಳ್ಳಿ ವಲಯ: ದಾಸರಹಳ್ಳಿ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿ ರಾಜಪ್ಪ ಕೆ.ಎನ್- 9448234928
- ಬೊಮ್ಮನಹಳ್ಳಿ ವಲಯ: ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿ ನರೇಂದ್ರ ಬಾಬು– 9480685399. ಬೊಮ್ಮನಹಳ್ಳಿ, ಆನೇಕಲ್ ವಿಧಾನಸಭಾ ಕ್ಷೇತ್ರಗಳಿಗೆ ಉಪ ವಲಯ ಅರಣ್ಯಾಧಿಕಾರಿ ವಿನಯ್- 7760933913.
- ಯಲಹಂಕ ವಲಯ: ಯಲಹಂಕ ವಿಧಾನಸಭಾ ಕ್ಷೇತ್ರಕ್ಕೆ ದೇವರಾಜ್ – 9964530649. ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿ ಮುತ್ತುರಾಜ್.ಕೆ.ಪಿ- 9483139438.
- ಆರ್.ಆರ್ ನಗರ ವಲಯ: ಆರ್.ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಭಾರ ವಲಯ ಅರಣ್ಯಾಧಿಕಾರಿ ರವೀಂದ್ರನಾಥ್– 6361903330. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ವಲಯ ಅರಣ್ಯಾಧಿಕಾರಿ ಜಗದೀಶ್.ವಿ- 9880516322.
- ಮಹದೇವಪುರ ವಲಯ: ಮಹದೇವಪುರ, ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರಗಳಿಗೆ ಪ್ರಭಾರ ವಲಯ ಅರಣ್ಯಾಧಿಕಾರಿ ಚಿದಾನಂದ್- 9480685541.