News

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉಚಿತ ವಾಹನ ಚಾಲನಾ ತರಬೇತಿ

Share It

ಹುಬ್ಬಳ್ಳಿ/ ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ 2023-24ನೇ ಸಾಲಿನ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉಚಿತವಾಗಿ ಊಟ-ಉಪಹಾರ ಹಾಗೂ ವಸತಿ ಸಹಿತ 30 ದಿನಗಳವರೆಗೆ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ಹಮ್ಮಿಕೊಂಡಿದೆ.

ತರಬೇತಿಯ ನಂತರ ಪರವಾನಿಗೆ ದೊರೆಯಲಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸದಾಗಿ ನಿರ್ಮಾಣಗೊಂಡಿರುವ ಗಂಗಿಭಾವಿ ರಸ್ತೆಯ ಶಿಗ್ಗಾವ ತರಬೇತಿ ಕೇಂದ್ರದಲ್ಲಿ ನೀಡಲಾಗಲಿದೆ. ಅರ್ಹ ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆಗಳಾದ 8095161818 / 9449925367 / 9449971416 ಅನ್ನು ಸಂಪರ್ಕಿಸಬಹುದಾಗಿದೆ.


Share It

You cannot copy content of this page