Education News

ನಾಳೆ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ

Share It

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ನಾಳೆ ಹೊರಬೀಳಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1 ಮಾರ್ಚ್ 1 ರಿಂದ 20 ರವರೆಗೆ ನಡೆದಿದ್ದು, ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ ಫಲಿತಾಂಶ ಲಭ್ಯವಾಗಲಿದೆ.

ಫಲಿತಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಮಂಗಳವಾರ ಮಧ್ಯಾಹ್ನ 12.30 ಕ್ಕೆ ಸಾಂಕೇತಿಕವಾಗಿ ಪ್ರಕಟಿಸಲಿದ್ದು, ಮಧ್ಯಾಹ್ನ 1:30 ರ ನಂತರ https://karresults.nic.in ಜಾಲತಾಣದಲ್ಲಿ ಅಂತಿಮ ಫಲಿತಾಂಶವನ್ನು ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ನೋಡಬಹುದಾಗಿದೆ.


Share It

You cannot copy content of this page