ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶದ ಬೆನ್ನಲ್ಲೇ ವಿದ್ಯಾರ್ಥಿಗಳು ಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆಯಲು ಮುಂದಾಗಿದ್ದಾರೆ.
ನಗರದ ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ನಗರ ವಿಶ್ವವಿದ್ಯಾಲಯ, ಎಂ.ಎಸ್.ರಾಮಯ್ಯ ವಿಶ್ವವಿದ್ಯಾಲಯ, ನೃಪತುಂಗ, ಮಹಾರಾಣಿ ಕ್ಲಸ್ಟರ್ ಸೇರಿದಂತೆ ಇತರೆ ಕಾಲೇಜುಗಳಿಗೆ ದಾಖಲಾತಿ ಪಡೆಯಲು ವಿದ್ಯಾರ್ಥಿಗಳು ಹಲವು ಕಾಲೇಜುಗಳಿಗೆ ಭೇಟಿ ನೀಡುತ್ತಿದ್ದಾರೆ.
ಡಿಗ್ರಿ ಕೋರ್ಸ್‌ಗಳಾದ ಕಲಾ, ವಿಜ್ಞಾನ, ವಾಣಿಜ್ಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳಾದ ಕಾನೂನು, ಆನಿಮೇಷನ್ ಮತ್ತು ಮಲ್ಟಿಮೀಡಿಯಾ, ಏವಿಯೇಷನ್, ಫ್ಯಾಷನ್ ಡಿಸೈನಿಂಗ್ ಮತ್ತು ಇತರೆ ಕೋರ್ಸ್‌ಗಳಿಗೆ ದಾಖಲಾತಿ ಪಡೆಯಲು ವಿದ್ಯಾಥಿಗಳು ಅನೇಕ ಕಾಲೇಜುಗಳತ್ತ ಮುಖ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ನೃಪತುಂಗ ವಿಶ್ವವಿದ್ಯಾಲಯದ ಕುಲಪತಿ ಫಜಿಯಾ ಸುಲ್ತಾನ, ನಮ್ಮ ವಿಶ್ವವಿದ್ಯಾಲಯದಲ್ಲಿ ಬಿಎಸ್‌ಸಿ, ಬಿಸಿಎ, ಬಿಬಿಎ ಸೇರಿದಂತೆ ಬಿಎಸ್‌ಸಿ, ಬಿ.ಎಡ್ ಕೋರ್ಸ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದಾಖಲಾತಿಗಾಗಿ ವಿಚಾರಣೆ ನಡೆಸುತ್ತಿದ್ದು, ಈ ಬಾರಿ ಶುಲ್ಕ ರಚನೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.