Education News

ನಾಳೆ ನೀಟ್ ಮಾಕ್ ಪರೀಕ್ಷೆ

Share It

ನವದೆಹಲಿ/ಬೆಂಗಳೂರು: ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆ ಮೇ. 4 ರಂದು ನಡೆಯಲಿದ್ದು, ಇದಕ್ಕೂ ಮುನ್ನ ಅಲೆನ್ ಕೆರಿಯರ್ ಇನ್‌ಸ್ಟಿಟ್ಯೂಟ್ ದೇಶಾದ್ಯಂತ ವಿದ್ಯಾರ್ಥಿಗಳಿಗೆ ಉಚಿತ ನೀಟ್ ರಾಷ್ಟ್ರೀಯ ಮಾಕ್ ಪರೀಕ್ಷೆಯನ್ನು ನಾಳೆ ರಾಷ್ಟ್ರಮಟ್ಟದಲ್ಲಿ ಆಯೋಜಿಸಿದೆ.

ವಿದ್ಯಾರ್ಥಿಗಳು ತಮ್ಮ ವಿಶ್ಲೇಷಣೆಯನ್ನು ಸಮಯಕ್ಕೆ ಸರಿಯಾಗಿ ಮಾಡಲು ಮತ್ತು ಕಾರ್ಯಕ್ಷಮತೆ ಸುಧಾರಿಸುವುದು ಈ ಪರೀಕ್ಷೆಯ ಉದ್ದೇಶವಾಗಿದೆ. ಅಲೆನ್ ವಿದ್ಯಾರ್ಥಿಗಳ ಜೊತೆಗೆ ದೇಶದ ಇತರ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದ್ದು, ಅಲೆನ್ 59 ನಗರಗಳಲ್ಲಿನ 138 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಸಲಿದೆ.

ಮೇ 4 ರಂದು ನಡೆಯಲಿದೆ ನೀಟ್ ಪರೀಕ್ಷೆ:

2025ರ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್‌ನಿಂದ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರವಿಲ್ಲದೆ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ. ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಮಧ್ಯಾಹ್ನ 1.30 ರೊಳಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸೂಚಿಸಲಾಗಿದೆ. ಪರೀಕ್ಷೆಯು ಆಫ್ ಲೈನ್ ನಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಪ್ರಶ್ನೆಗಳಿಗೆ ಉತ್ತರಿಸಲು ನೀಲಿ ಅಥವಾ ಕಪ್ಪು ಪೆನ್ನು ಬಳಸಬೇಕಾಗಿರುತ್ತದೆ. ನೀಟ್ ಪರೀಕ್ಷೆಯು ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ಹೀಗೆ ನಾಲ್ಕು ವಿಷಯಗಳಿಗೆ ನಡೆಯಲಿದೆ.


Share It

You cannot copy content of this page