Education News

ಶಿಷ್ಯವೇತನದೊಂದಿಗೆ ವೃತ್ತಿಪರ ತರಬೇತಿಗೆ ಅರ್ಜಿ; ಅವಧಿ ವಿಸ್ತರಿಸಿದ ಸಮಾಜ ಕಲ್ಯಾಣ ಇಲಾಖೆ

Share It

ಬೆಂಗಳೂರು: ಶಿಷ್ಯವೇತನದೊಂದಿಗೆ ವೃತ್ತಿಪರ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸಮಾಜ ಕಲ್ಯಾಣ ಇಲಾಖೆ ವಿಸ್ತರಿಸಿದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಐ.ಐ.ಎಸ್ ಸಿ, ಐ.ಐ.ಟಿ ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ ವೃತ್ತಿಪರ ತರಬೇತಿ ಕೋರ್ಸುಗಳಿಗೆ 15 ಸಾವಿರ ರೂಪಾಯಿ ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 25 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆಗಳಾದ 080-2224 0449, 9480843019 ಗಳಿಗೆ ಸಂಪರ್ಕಿಸಬಹುದಾಗಿದೆ.


Share It

You cannot copy content of this page