ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅಧಿಕಾರದ ಮೇರೆಗೆ ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ ಆದೇಶಿಸಿದೆ.
ಮೇ8 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕವಾಗಿದೆ. ಮೇ14 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳನ್ನು ಪರಿಶೀಲನೆ ಮೇ15 ರಂದು ನಡೆಯಲಿದೆ. ಇನ್ನು ಮತದಾನ ಮೇ20 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಮರು ಮತದಾನ ಅವಶ್ಯವಿದ್ದರೆ ಮೇ 27 ರಂದು ನಡೆಸಲಾಗುತ್ತಿದ್ದು, ಅಂತಿಮ ಮತ ಎಣಿಕೆ ಮೇ28 ರ ಬೆಳಗ್ಗೆ 8 ಗಂಟೆಯಿಂದ ಸಂಬಂಧಿಸಿದ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟಾರೆಯಾಗಿ ಚುನಾವಣೆಯ ಸಂಬಂಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ8 ರಿಂದ ಮೇ28 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ.