Education News

ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶಕ್ಕೆ ಹೆಚ್ಚಾಗಿದೆ ಡಿಮ್ಯಾಂಡ್

Share It

ಬೆಂಗಳೂರು: 2025-26 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮುಸ್ಲಿಂ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ಪ್ರವೇಶಕ್ಕೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ.

ಇಲಾಖೆ ಅಡಿಯಲ್ಲಿ 134 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು ಪ್ರಸಕ್ತ ಸಾಲಿನಲ್ಲಿ ದಾಖಲಾತಿಗೆ 11,330 ಸೀಟುಗಳು ಲಭ್ಯವಿದೆ. ಈ ಬಾರಿ 6424 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಭಾನುವಾರ ಪರೀಕ್ಷೆ ಬರೆದಿದ್ದಾರೆ. ಒಟ್ಟು 145 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿದ್ದು, 41 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದಡಿಯಲ್ಲಿ ಸಿ.ಬಿ.ಎಸ್.ಸಿ ಪಠ್ಯಕ್ರಮವನ್ನು ಅಳವಡಿಸಿ ಜಿಲ್ಲೆಗೆ ಒಂದರಂತೆ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು ತೆರೆಯಲಾಗಿದೆ. ಪ್ರವೇಶ ಪ್ರಕ್ರಿಯೆ ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ಸಂಪೂರ್ಣ ಆನ್ಲೈನ್ ನಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಅಲ್ಪಸಂಖ್ಯಾತರ ನಿರ್ದೇಶನಲಯದ ನಿರ್ದೇಶಕ ಜಿಲಾನಿ ಮೊಕಾಶಿ ತಿಳಿಸಿದ್ದಾರೆ.


Share It

You cannot copy content of this page