ಬೆಂಗಳೂರು: ಜಮ್ಮು- ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಭರತ್ ಭೂಷಣ್ ಅವರ ಪತ್ನಿಯಿಂದ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳ ತಂಡ ಮಾಹಿತಿ ಪಡೆದುಕೊಂಡಿದೆ.
ಮತ್ತಿಕೆರೆಯ ಸುಂದರ್ ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳ ತಂಡ ಭರತ್ ಭೂಷಣ್ ಅವರ ಪತ್ನಿ ಸುಜಾತರಿಂದ ಘಟನಾ ದಿನದ ಮಾಹಿತಿ ಕಲೆ ಹಾಕಿದ್ದಾರೆ.
ದಾಳಿ ನಡೆದ ಸಂದರ್ಭದಲ್ಲಿನ ಘಟನಾವಳಿಗಳು, ಕೃತ್ಯಕ್ಕೆ ಮುನ್ನ ಉಗ್ರರು ಏನು ಮಾತನಾಡಿದರು, ಅವರ ಮುಖಚಹರೆ ಮತ್ತಿತರ ವಿವರಗಳನ್ನ ಎನ್ಐಎ ಅಧಿಕಾರಿಗಳು ಪಡೆದುಕೊಂಡಿದ್ದಾರೆ.