Education News

ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ

Share It

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೆಡೆಸುವ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನವಾಗಿದೆ.

2025-26ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ) ಪ್ರವೇಶದ ಪಿಜಿಸಿಇಟಿ ಹಾಗೂ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸುವ ಡಿಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಎರಡೂ ಪರೀಕ್ಷೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 10 ಮತ್ತು ಶುಲ್ಕ ಪಾವತಿಗೆ ಮೇ 12 ಕೊನೆಯ ದಿನವಾಗಿದೆ.

ಪಿಜಿಸಿಇಟಿಯನ್ನು ಮೇ ಕೊನೆ ಅಥವಾ ಜೂನ್ ಮೊದಲ ವಾರದಲ್ಲಿ ನಡೆಸಲಾಗುತ್ತದೆ. ಡಿಸಿಇಟಿಯನ್ನು ಮೇ 31ರಂದು ನಡೆಸಲು ತೀರ್ಮಾನಿಸಲಾಗಿದೆ. ಪಿಜಿ- ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಕ್ಕೆ ಕೆಇಎ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ, ಬದಲಿಗೆ ಆರ್ಕಿಟೆಕ್ಚರ್ ಕೌನ್ಸಿಲ್ ನಡೆಸುವ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಆದರೆ ಅವರು ಕೂಡ ಈಗ ಅರ್ಜಿ ಸಲ್ಲಿಸಬೇಕಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.


Share It

You cannot copy content of this page