ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಉತ್ತರ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವೈದ್ಯಕೀಯ (ಎಂಬಿಬಿಎಸ್) ಹಾಗೂ ಬಿ.ಡಿ.ಎಸ್, ಬಿ.ಇ/ ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ಪದವಿ ಕೋರ್ಸ್ ಗಳಿಗೆ ದಾಖಲಾಗುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಫ್ರೆಶ್ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಹರಾಗಿದ್ದು, ಇದಕ್ಕೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಸಕ್ತ ವಿದ್ಯಾರ್ಥಿಗಳು www.kmdconline.karnataka.gov.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 23 2025 ಕೊನೆಯ ದಿನವಾಗಿದೆ. ಅರ್ಜಿಯ ಹಾರ್ಡ್ ಕಾಪಿಗಳನ್ನು ಹಾಗೂ ಇತರ ಮೂಲ ದಾಖಲೆಗಳನ್ನು ಮೇ 26 ರೊಳಗೆ ಜಿಲ್ಲಾ ವ್ಯಾವಸ್ಥಾಪಕರ ಕಚೇರಿಗೆ ಸಲ್ಲಿಸಬೇಕಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯಾವಸ್ಥಾಪಕರ ಕಚೇರ, ಬೆಂಗಳೂರು ನಗರ ಜಿಲ್ಲೆಯ ಉತ್ತರ ವಿಭಾಗ, ನಂ. 40, 2ನೇ ಅಡ್ಡ ರಸ್ತೆ, ಇಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೇ ಮುಖ್ಯ ರಸ್ತೆ, ವಸಂತಪ್ಪ ಬ್ಲಾಕ್, ಗಂಗಾನಗರ, ಬೆಂಗಳೂರು ಅಥವಾ ದೂರವಾಣಿಯಾದ 080-23539786 ಗೆ ಸಂಪರ್ಕಿಸಬಹುದಾಗಿದೆ.