Law News

ಬೈಕ್‌ ಟ್ಯಾಕ್ಸಿ ಸೇವೆಯನ್ನು ಮುಂದುವರಿಸುವಂತೆ ಆದೇಶಿಸಿದ ಹೈಕೋರ್ಟ್

Share It

ಬೆಂಗಳೂರು: ಓಲಾ, ಉಬರ್ ಮತ್ತು ರ್ಯಾಪಿಡೊ ಬೈಕ್‌ ಟ್ಯಾಕ್ಸಿ ಸೇವೆಯನ್ನು ಜೂನ್ 15ರವರೆಗೆ ಮುಂದುವರಿಸುವಂತೆ ಸೂಚಿಸಿ ಕರ್ನಾಟಕ ಹೈಕೋರ್ಟ್ ಆದೇಶವನ್ನು ನೀಡಿದೆ.

ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸುವಂತೆ ಕೋರಿ ಉಬ‌ರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್,  ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ. ಶ್ಯಾಮಪ್ರಸಾದ್ ಅವರ ಏಕಸದಸ್ಯ ಪೀಠ ವಿಚಾರಣೆಯನ್ನು ನಡೆಸಿ ಸೇವೆಗೆ ಜೂನ್ 15ರವರೆಗೆ ತಾತ್ಕಾಲಿಕ ಅನುಮತಿಯನ್ನು ನೀಡಿ ಆದೇಶವನ್ನು ಹೊರಡಿಸಿದೆ.


Share It

You cannot copy content of this page