ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಾಳೆ ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಲಿದೆ.
2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರ ಪರೀಕ್ಷೆಗಳು ಮಾ.21 ರಿಂದ ಏ.4 ರವರೆಗೆ ನಡೆದಿದ್ದು, ಒಟ್ಟು 8,96,447 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು, 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆದಿದ್ದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವ ಸಂಬಂಧ ಬೆಳಗ್ಗೆ 11.30 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ ಫಲಿತಾಂಶವನ್ನು ಜಾಲತಾಣದಲ್ಲಿ ಮಧ್ಯಾಹ್ನ 12.30 ರ ಬಳಿಕ ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ.