ಬೆಂಗಳೂರು: ನಂದಿನಿ, ಮದರ್ ಡೈರಿ ಹಾಲಿನ ದರಗಳ ಹೆಚ್ಚಳದ ಬಳಿಕ ಇದೀಗ ಮತ್ತೊಂದು ಜನಪ್ರಿಯ ಡೈರಿ ಉತ್ಪನ್ನ ಅಮುಲ್ ಕೂಡಾ ಹಾಲಿನ ದರವನ್ನು ಹೆಚ್ಚಳ ಮಾಡಿದೆ.
ಇಂದಿನಿಂದ ಅಮುಲ್ ಹಾಲಿನ ದರ ಎರಡು ರೂಪಾಯಿ ಹೆಚ್ಚಳವಾಗಿದ್ದು, ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಅಂಡ್ ಕ್ರೀಮ್, ಅಮುಲ್ ಚಾಯ್ಮಜಾ, ಅಮುಲ್ ತಾಜಾ ಮತ್ತು ಅಮುಲ್ ಕೌ ಮಿಲ್ಕ್ ಗಳಿಗೆ ದರ ಏರಿಕೆ ಅನ್ವಯವಾಗಲಿದೆ.
ಕಳೆದ ವರ್ಷವಷ್ಟೇ ಗ್ರಾಹಕರಿಗೆ ರಿಲೀಫ್ ನೀಡಲು ಅಮುಲ್ ಸುಮಾರು ಐದು ತಿಂಗಳ ಕಾಲ 1 ಲೀಟರ್ ಮತ್ತು 2 ಲೀಟರ್ ಹಾಲಿನ ಪ್ಯಾಕ್‌ಗಳಲ್ಲಿ ಕ್ರಮವಾಗಿ 50 ಮಿಲಿ ಮತ್ತು 100 ಮಿಲಿ ಹೆಚ್ಚುವರಿ ಹಾಲನ್ನು ಉಚಿತವಾಗಿ ನೀಡಿತ್ತು. ಕಳೆದ ಜನವರಿಯಲ್ಲಿ, 1 ಲೀಟರ್ ಪ್ಯಾಕ್‌ನ ಬೆಲೆ 1 ರೂಪಾಯಿ ಕಡಿಮೆ ಮಾಡಿತ್ತು. ಆದರೆ ಇದೀಗ ದರ ಏರಿಕೆ ಮಾಡುವ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ತಿಂಗಳ ಆರಂಭದಲ್ಲಿ ಮತ್ತೊಂದು ದರ ಏರಿಕೆಯ ಬರೆ ಬಿದ್ದಿದೆ.