ಬೆಂಗಳೂರು: 2023-24ನೇ ಸಾಲಿನ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್- ಎ ಮತ್ತು ಗ್ರೂಪ್
-ಬಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಮೇ 3 ರಿಂದ ನಡೆಯಲಿದ್ದು, ನಗರದ 9 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ ಮಾಡಿರುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.
ಮೇ 3, 5 ಮತ್ತು 7, 9 ರಂದು ಬೆಂಗಳೂರು ನಗರದ ಒಂಬತ್ತು ಪರೀಕ್ಷಾ ಕೇಂದ್ರಗಳ ಸುತ್ತ 2೦೦ ಮೀಟರ್ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಹಾಗೂ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಎಲ್ಲ ಜೆರಾಕ್ಸ್ ಹಾಗೂ ಪುಸ್ತಕಗಳ ಅಂಗಡಿಗಳನ್ನು ಮುಚ್ಚುವಂತೆ ಕೋರಿದ್ದಾರೆ.
ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ಸಲುವಾಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಿಯಮ ಬಾಹಿರ ಹಾಗೂ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗಳ್ಳಲಾಗುವುದು ಎಂದು ತಿಳಿಸಿದ್ದಾರೆ.