ಬೆಂಗಳೂರು: 2025-26ನೇ ಸಾಲಿನ ಮೊದಲನೇ ವರ್ಷದ ಎಂಬಿಎ, ಎಂಸಿಎ, ಎಂಎ, ಎಂ.ಟೆಕ್, ಎಂ. ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ನಡೆಯುವ ಪಿಜಿಸಿಇಟಿ-2025 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಿದೆ.
ಗೇಟ್ ಪರೀಕ್ಷೆಯಲ್ಲಿ ಮಾನ್ಯತೆ ಅಂಕಗಳನ್ನು ಹೊಂದಿದವರು ಎಂಎ, ಎಂ.ಟೆಕ್ ಕೋರ್ಸುಗಳ ಪ್ರವೇಶಕ್ಕಾಗಿ, ಪಿಜಿಸಿಇಟಿ-2025ಕ್ಕೆ ಹಾಜರಾಗಬೇಕಾಗಿಲ್ಲ, ಆದರೆ ಅಂತಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಶುಲ್ಕವನ್ನು ಪಾವತಿಸಿ ಪ್ರವೇಶಕ್ಕೆ ಅರ್ಹರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ತಿಳಿಸಿದ್ದಾರೆ.
ಕರ್ನಾಟಕ ಮತ್ತು ಕರ್ನಾಟಕೇತರ ಅಭ್ಯರ್ಥಿಗಳ ಎಂ.ಆರ್ಕ್ (ಮಾಸ್ಟರ್ ಆಫ್ ಆರ್ಕಿಟೆಕ್ಚರ್} ಕೋರ್ಸ್ ಪ್ರವೇಶಕ್ಕೆ ನವ ದೆಹಲಿಯ ವಾಸ್ತುಶಿಲ್ಪ ಮಂಡಳಿ ನಡೆಸುವ ಪಿಜಿಇಟಿಎ-2025 ರ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಕೌನ್ಸೆಲಿಂಗ ಪ್ರಕ್ರಿಯೆ ನಡೆಸಲಾಗುವುದು. ಇಂಜಿನಿಯರಿಂಗ್ ಹಾಗೂ ಟೆಕ್ನಾಲಜಿ ವಿಭಾಗದಲ್ಲಿ ಗೇಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಮಾತ್ರ ವಿಟಿಯು, ಬೆಳಗಾವಿ ಅಡಿಯಲ್ಲಿನ ವಿವಿಧ ಎಂ.ಟೆಕ್ ಕೋರ್ಸುಗಳಿಗೆ ಪ್ರವೇಶ ಪಡೆಯಲು ನೇರವಾಗಿ ಅರ್ಹರಾಗುತ್ತಾರೆ ಎಂದು ಹೇಳಿದ್ದಾರೆ.