Education News

ಎಸ್.ಎಸ್.ಎಲ್.ಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ

Share It

ಬೆಂಗಳೂರು: ಎಸ್.ಎಸ್.ಎಲ್.ಸಿ-2 ಪರೀಕ್ಷೆಯು ಮೇ 26 ರಿಂದ ಜೂನ್ 2ರ ವರೆಗೆ ನಡೆಯಲಿದೆ.

ಮಾರ್ಚ್ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವವರು, ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವವರು ಮೇ 10ರ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷಾ ಶುಲ್ಕ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-2 ರ ವೇಳಾಪಟ್ಟಿ ಹೀಗಿದೆ:

26 ಮೇ 2025: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ).

27 ಮೇ 2025: ಗಣಿತ ಮತ್ತು ಸಮಾಜ ಶಾಸ್ತ್ರ.

28 ಮೇ 2025: ದ್ವಿತೀಯ ಭಾಷೆ (ಇಂಗ್ಲೀಷ್, ಕನ್ನಡ).

29 ಮೇ 2025: ಸಮಾಜ ವಿಜ್ಞಾನ.

30 ಮೇ 2025: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಮತ್ತು ವೃತ್ತಿಪರ ವಿಷಯಗಳು (ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಇತರೆ).

31 ಮೇ 2025: ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.

2 ಜೂನ್ 2025: ಜೆಟಿಎಸ್ ವಿಷಯಗಳು (ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಅರ್ಥಶಾಸ್ತ್ರ).


Share It

You cannot copy content of this page