ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದ 2024ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ವೇಳಾ ಪಟ್ಟಿ ಪ್ರಕಟಗೊಂಡಿದೆ.
ಮೇ. 5 ರಿಂದ ಜೂ.12ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಕೆ.ಪಿ.ಎಸ್.ಸಿ ನಡೆಸಲಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರಗಳಲ್ಲಿ ಮೇ.15 ರಿಂದ 24ರವರೆಗೆ ಮತ್ತು ಮೇ. 26 ರಿಂದ 31ರವರೆಗೆ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷೆ ನಿಗದಿಪಡಿಸಲಾಗಿದೆ.
ಪರೀಕ್ಷೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpsc.kar.nic.in ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.