ಬೆಂಗಳೂರು: 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಅರ್ಜಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಗಳನ್ನು ಆಹ್ವಾನಿಸಿದೆ. ಈ ತರಬೇತಿಯು 1೦ ತಿಂಗಳ ಕಾಲ ನಡೆಯಲಿದೆ.
ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗದಿತ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮತ್ತು ಪದವಿ ಅಂತಿಮ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ 75೦ರೂ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಮೇ. 8 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೇ ದಿನ ಮೇ. 19 ಮತ್ತು ಅರ್ಜಿ ಶುಲ್ಕವನ್ನು ಪಾವತಿಸಲು ಮೇ. 20 ರಂದು ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ https://cetonline.karnataka.gov.in/kea ಗೆ ಸಂಪರ್ಕಿಸಬಹುದಾಗಿದೆ.
ಪರೀಕ್ಷಾ ವೇಳಾಪಟ್ಟಿ:
ಮೇ. 31 ರಂದು ಸಾಮಾನ್ಯ ಅಧ್ಯಯನ ಮಧ್ಯಾಹ್ನ 2.30 ರಿಂದ 4.30ರವರೆಗೆ ನಡೆಯಲಿದ್ದು, ಇಲಾಖೆಯಿಂದ ಈಗಾಗಲೇ ತರಬೇತಿ ಪಡೆದ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ಕೆಇಎ ಮಾಹಿತಿ ನೀಡಿದೆ.