ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಶೀಘ್ರವೇ 17 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಪ್ರಸ್ತುತ 10 ಸಾವಿರ ಸರ್ಕಾರಿ ಶಾಲೆಗಳಿಗೆ, 6.5 ಸಾವಿರ ಅನುದಾನಿತ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಟ್ಟು 11 ಸಾವಿರ ಸೇರಿದಂತೆ ಒಟ್ಟು 17,೦೦೦ ಶಿಕ್ಷಕರ ನೇಮಕಾತಿ ಶೀಘ್ರವೇ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.