ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವೇಶ್ವರಯ್ಯ ಇಂಜನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್, ಕಮ್ಯೂನಿಕೇಶನ್ ಇಂಜನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಂ.ಟೆಕ್, ಪಿಎಚ್ ಡಿ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು https://www.uvce.karnataka.gov.in ವೆಬ್ ಸೈಟ್ ನಿಂದ ಡೌನಲೋಡ್ ಮಾಡಿಕೊಂಡು ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಮೇ. 12ರೊಳಗಾಗಿ ಸಲ್ಲಿಸಬೇಕಿದೆ.
ನಿಗಡಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಯಾವುದೇ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳದಿರುವ ಹಕ್ಕನ್ನು ವಿಶ್ವವಿದ್ಯಾಲಯವು ಕಾಯ್ದಿರಿಸಿಕೊಂಡಿದೆ. ಹೆಚ್ಚಿನ ಮಾಹಿತಿಗಾಗಿ ವಿಭಾಗದ ಮುಖ್ಯಸ್ಥರನ್ನು ಸಂಪರ್ಕಿಸಬಹುದು ಎಂದು ಯುವಿಸಿಇ ಪ್ರಭಾರ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.