ಬೆಂಗಳೂರು: ಖಾಸಗಿ ಅನುದಾನರಹಿತ ಪದವಿಪೂರ್ವ ಕಾಲೇಜುಗಳು ಎದುರಿಸುತ್ತಿರುವ ಹಲವಾರು ಪ್ರಮುಖ ಸಮಸ್ಯೆಗಳು ಮತ್ತು ಅವುಗಳಿಗೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವ ಕುರಿತು ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದೆ.
ಸಂಘವು ಸಲ್ಲಿಸಿರುವ ಮನವಿಯನ್ನು ಕಾಲಮಿತಿಯೊಳಗೆ ಪರಿಗಣಿಸಿ, ಸೂಕ್ತ ಕ್ರಮ ಕೈಗೊಂಡು ಪರಿಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ತಿಳಿಸಿದ್ದಾರೆ.
ಈ ವೇಳೆ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ ಮಹೇಶ್, ಪದವಿ ಪೂರ್ವ ನಿರ್ದೇಶಕ ಸಿಂಧೂ ಬಿ ರೂಪೇಶ್ ಸೇರಿದಂತೆ ಖಾಸಗಿ ಪದವಿ ಪೂರ್ವ ಕಾಲೇಜುಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮತ್ತು ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಮತ್ತು ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.