ಬೆಂಗಳೂರು: ಪಹಲ್ಗಾಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ತೊಡಗಿದ್ದ, ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ನಮ್ಮ ದೇಶವನ್ನು ಕಾಯುವ ಸೈನಿಕರಿಗೆ ಶಕ್ತಿ ತುಂಬಲು ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ವಕ್ಪ್ ಬೋರ್ಡ್ ಮುಖ್ಯ ಕಾರ್ಯನಿರ್ವಹಾಧಿಕಾರಿಗಳಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.